ತುಮಕೂರು : ವ್ಯಕ್ತಿ ಬದುಕಿದ್ದರೂ ಆತ ಮೃತಪಟ್ಟಿದ್ದಾನೆಂದು ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿ ಬೇಜವಾಬ್ದಾರಿತನ ತೋರಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಅರಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಟಿ.ಶಿವಪ್ರಸಾದ್ ಮೃತಪಟ್ಟಿದ್ದಾರೆ ಎಂದು ಮತದಾರರ ಪಟ್ಟಿಯಿಂದ ತೆಗದುಹಾಕಲಾಗಿದೆ. ಇದು ಗಮನಕ್ಕೆ ಬರುತ್ತಿದ್ದಂತೆ ಶಿವಪ್ರಸಾದ್ ಗಲಿಬಿಲಿಗೊಂಡಿದ್ದಾರೆ. ಅಲ್ಲದೇ ಸಹಜವಾಗಿ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಹಶೀಲ್ದಾರ್ಗೆ ದೂರು ನೀಡಿದ್ದಾರೆ. ಅಲ್ಲದೇ ಸೈಬರ್ ಕ್ರೈಂ ಠಾಣೆಯಲ್ಲೂ ದೂರು ನೀಡುವುದಾಗಿ ತಿಳಿಸಿದ್ದಾರೆ.
ಅಲ್ಲದೇ ಗ್ರಾಮ ಪಂಚಾಯಿತಿ ಸದಸ್ಯೆ ಶಾರದಮ್ಮ ಹೆಸರನ್ನು ಸಹ ಪಟ್ಟಿಯಿಂದ ಕೈಬಿಟ್ಟು ನಂತರ ಸೇರ್ಪಡೆಗೊಳಿಸಲಾಗಿದೆ ಎಂದಿದ್ದಾರೆ. ಮುಖ್ಯವಾಗಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಬಿಜೆಪಿ ಮುಖಂಡರ ಕುತಂತ್ರದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ