ETV Bharat / state

ತುಮಕೂರು: ಕೊಪ್ಪ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿದ 300ಕ್ಕೂ ಹೆಚ್ಚು ಜನ - Karnataka assembly election

ತುಮಕೂರಿನ ಕೊಪ್ಪ ಗ್ರಾಮದಲ್ಲಿ 300ಕ್ಕೂ ಹೆಚ್ಚ ಜನರು ಮತದಾನ ಬಹಿಷ್ಕಾರ ಮಾಡಿದ್ದಾರೆ.

ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು
ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು
author img

By

Published : May 10, 2023, 9:51 AM IST

Updated : May 10, 2023, 10:48 AM IST

ಮತದಾನ ಬಹಿಷ್ಕಾರ

ತುಮಕೂರು: ರಾಜ್ಯಾದ್ಯಂತ ಈಗಾಗಲೇ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಮತದಾನ ಈಗಾಗಲೇ ಆರಂಭಗೊಂಡಿದೆ. ಮತದಾತರು ತಮ್ಮ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ, ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದ ರಾಯಸಂದ್ರದ ಕೊಪ್ಪದಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದು ಮತಗಟ್ಟೆ 56ರಲ್ಲಿ ಗ್ರಾಮಸ್ಥರು ಮತದಾನ ನಿರಾಕರಿಸಿದ್ದಾರೆ. ಕೊಪ್ಪ ಗ್ರಾಮದಲ್ಲಿ ಸುಮಾರು 500 ಕ್ಕೂ ಹೆಚ್ಚು ಮತಗಳಿವೆ. ಅದರಲ್ಲಿ 300 ಕ್ಕೂ ಹೆಚ್ಚು ಮತದಾರರು ಮತದಾನ ಮಾಡಲು ನಿರಾಕರಿಸಿದ್ದಾರೆ. ಗ್ರಾಮದಲ್ಲಿ ರಸ್ತೆ, ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಆರೋಪಿಸಿ ಘೋಷಣೆ ಕೂಗಿ ಮತದಾನ ಬಹಿಷ್ಕರಿಸಿದ್ದಾರೆ.

ಡಾ. ಜಿ ಪರಮೇಶ್ವರ್​ ಮತಚಲಾವಣೆ: ತುಮಕೂರಿನ ಸಿದ್ದಾರ್ಥ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 133ರ ಬೂತ್ ನಂ 59ರಲ್ಲಿ ಡಾ. ಜಿ ಪರಮೇಶ್ವರ್​ ಹಾಗೂ ಪತ್ನಿ ಕನ್ನಿಕಾ ಪರಮೇಶ್ವರ್ ಸಮೇತ ಬಂದು ಮತ ಚಲಾವಣೆ ಮಾಡಿದ್ದಾರೆ. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರಟಗೆರೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಓದಿದ ಊರು, ಶಾಲೆಯಲ್ಲೇ ಮತದಾನ ಮಾಡುತ್ತೇನೆ. ನನಗೆ ಭಾವನಾತ್ಮಕ ಸಂಬಂಧ ಇದೆ. ಹಾಗಾಗಿ ನಾನು ಸ್ಪರ್ಧೆ ಮಾಡುವ ಕೊರಟಗೆರೆ ಕ್ಷೇತ್ರದಲ್ಲಿ ಮತ ವರ್ಗಾವಣೆ ಮಾಡಿಕೊಂಡಿಲ್ಲ ಎಂದರು.

ನಮ್ಮ ಮತಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಶ್ರೀ ಸಿದ್ದಲಿಂಗ ಸ್ವಾಮೀಜಿ: ನಮ್ಮ ಮತ ಅಮೂಲ್ಯ ಆಗಿರುವಂತಹದ್ದು, ಅದಕ್ಕೆ ಕೋಟಿ ಕೊಟ್ಟರೂ ಬೆಲೆ ಕಟ್ಟಲು ಸಾಧ್ಯವೇ ಇಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಗಂಗಾ ಸ್ವಾಮೀಜಿ ತಿಳಿಸಿದ್ದಾರೆ. ಮತದಾನ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅಷ್ಟು ಬೆಲೆ ಬಾಳುವ ಮತವನ್ನ ಆಮಿಷಗಳಿಗೆ ಒಳಗಾಗದೇ ಮತ ಚಲಾವಣೆ ಮಾಡಬೇಕು ಎಂದು ಹೇಳಿದರು. ಇದು ಪ್ರಜಾಪ್ರಭುತ್ವದ ಹಕ್ಕು, ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ಶ್ರೀಗಳು ಕರೆ ನೀಡಿದ್ದರು.

ಭಾರತೀಯ ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನ ಆಯ್ಕೆ ಮಾಡಿಕೊಳ್ಳುವಂತ ವ್ಯವಸ್ಥೆ ಇರುವಂತಹದ್ದು. ಸಂವಿಧಾನ ಕೊಟ್ಟಿರುವ ಹಕ್ಕನ್ನ ಪ್ರತಿಯೊಬ್ಬರು ಚಲಾವಣೆ ಮಾಡಬೇಕು ಎಂದು ತಿಳಿಸಿದರು. ಯಾರು ಕೂಡ ಮನೆಯಲ್ಲಿ ಉಳಿಯದೇ ಪ್ರಜಾಪ್ರಭುತ್ವದ ಯಶಸ್ವಿಗೆ ಮತದಾನ ಮಾಡಬೇಕು. ನ್ಯಾಯ ಮತ್ತು ಮುಕ್ತವಾದ ರೀತಿಯಲ್ಲಿ ಹಕ್ಕು ಚಲಾಯಿಸಬೇಕು ಎಂದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65 ಜನರಿಂದ ಮತದಾನ!

Last Updated : May 10, 2023, 10:48 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.