ETV Bharat / state

ವೈಯಕ್ತಿಕವಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ರೂ ಕಠಿಣ ಕ್ರಮ: ತುಮಕೂರು ಎಸ್ಪಿ ವಾರ್ನಿಂಗ್​ - tumkur district police action

ಪ್ರಚೋದನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿರುವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಜಿಲ್ಲಾ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

Watch eyes on social media and controversial statements
ಪ್ರಚೋದನಕಾರಿ ಹೇಳಿಕೆ,,, ಸಾಮಾಜಿಕ ಜಾಲತಾಣದ ಮೇಲೆ ಹದ್ದಿನಕಣ್ಣು..!
author img

By

Published : Feb 26, 2020, 8:35 AM IST

ತುಮಕೂರು: ಪ್ರಚೋದನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿರುವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಜಿಲ್ಲಾ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ

ಕಳೆದ 10 ದಿನಗಳ ಹಿಂದಷ್ಟೇ ಪ್ರಚೋದನಕಾರಿ ಹೇಳಿಕೆಗಳನ್ನು ಫೇಸ್ಬುಕ್ ಹಾಗೂ ವಾಟ್ಸಾಪ್ನಲ್ಲಿ ವೈರಲ್ ಮಾಡಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಅದರಲ್ಲಿ ಮಧುಗಿರಿ ಮೋದಿ ಎಂಬಾತ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಪೊಲೀಸರು ತಂಡ ಕಾರ್ಯಪ್ರವೃತ್ತವಾಗಿದೆ. ಅದೇ ರೀತಿ ತಿಪಟೂರಿನ ವ್ಯಕ್ತಿಯೊಬ್ಬ ಪ್ರಚೋದನಕಾರಿ ಹೇಳಿಕೆಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ವೈರಲ್ ಮಾಡಿದ್ದನು ಆತನ ಮೇಲೂ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಇಬ್ಬರೂ ಕೂಡ ತಮ್ಮ ವೈಯಕ್ತಿಕ ನೆಲೆಗಟ್ಟಿನಲ್ಲಿ ಹೇಳಿಕೆಗಳನ್ನು ವೈರಲ್ ಮಾಡಿದ್ದಾರೆ. ಆದರೆ, ಯಾವುದೇ ಸಂಘಟನೆಗೆ ಸೇರಿದವರಲ್ಲ. ಅಲ್ಲದೆ ವೈಯಕ್ತಿಕ ನೆಲೆಗಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದರೂ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ.

ಇನ್ನೂ ವಾಟ್ಸಪ್ ಗ್ರೂಪ್ ಗಳು ಹಾಗೂ ಫೇಸ್ಬುಕ್ ಮೇಲೆ ನಿರಂತರವಾಗಿ ಗಮನ ಹರಿಸಿರುವ ವಿಶೇಷ ಪೊಲೀಸ್ ತಂಡ ಅಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ವ್ಯಕ್ತಿಗಳನ್ನು ತಕ್ಷಣ ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಲಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮಕ್ಕೆ ಮುಂದಾಗಲಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.