ತುಮಕೂರು: ಪಶು ಆಹಾರ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಯಂತ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ.
ಮಂಗಳಮ್ಮ (40) ಮೃತಪಟ್ಟವರು ಎನ್ನಲಾಗಿದೆ. ಉಪಕರಣದ ಸಮೀಪ ಕೆಲಸ ಮಾಡುತ್ತಿದ್ದ ಅವರ ಸೀರೆ ಮಷಿನ್ಗೆ ಸಿಲುಕಿದ್ದರಿಂದ ಈ ಅವಘಡ ಸಂಭವಿಸಿದೆ.
ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದರಿಂದ ಗುಬ್ಬಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.