ತುಮಕೂರು: ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಯೋಜನೆಯ ಪೈಪ್ಲೈನ್ ಕೆಲಸ ಮಾಡಲು ಬಂದಿರುವ ವಿವಿಧ ರಾಜ್ಯಗಳ 20ಕ್ಕೂ ಹೆಚ್ಚು ಮಂದಿ ಲಾಕ್ಡೌಕ್ನಿಂದಾಗಿ ಕಂಗಾಲಾಗಿದ್ದು, ವಾಪಸ್ ತಮ್ಮ ಊರಿಗೆ ಕಳಿಸಿಕೊಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳಲ್ಲಿ ತೊಡಗಿಸಿಕೊಂಡಿದ್ದ ಕಾರ್ಮಿಕರು ತಾವು ಕೆಲಸ ಮಾಡುತ್ತಿದ್ದ ಸ್ಥಳಗಳಲ್ಲಿ ಟೆಂಟು ಹಾಕಿಕೊಂಡು ವಾಸವಾಗಿದ್ದಾರೆ. ಇನ್ನು ಕೈಗೆ ಕೆಲಸವಿಲ್ಲದೆ ದಿಕ್ಕೇ ತೋಚದಂತಾಗಿದ್ದು, ತಮ್ಮ ಊರುಗಳಿಗೆ ವಾಪಸ್ ಹೋಗಲೂ ಆಗದೆ ಕಂಗಾಲಾಗಿದ್ದಾರೆ. ಹೀಗಾಗಿ ತಮ್ಮ ಊರುಗಳಿಗೆ ಹೋಗಲು ಅವಕಾಶ ಕಲ್ಪಿಸಿಕೊಟ್ಟರೆ ತಾವು ವೈದ್ಯಕೀಯ ಪರೀಕ್ಷೆಗೆ ಒಳಗಾಗಲೂ ತಯಾರಿದ್ದೇವೆ ಎಂದು ಹೇಳಿದ್ದಾರೆ.