ETV Bharat / state

ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ ಬಂದಿದೆ: ಬಿ ಎಸ್ ಯಡಿಯೂರಪ್ಪ ಆರೋಪ

ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿನ್ನೆ ತುಮಕೂರಿನಲ್ಲಿ ಮಾತನಾಡಿದ್ದು, ಗ್ಯಾರಂಟಿಗಳ ಬಗ್ಗೆ ಲೇವಡಿ ಮಾಡಿದ್ದಾರೆ.

author img

By

Published : Jun 24, 2023, 8:29 AM IST

ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ತುಮಕೂರು: ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕೊಟ್ಟು, ಜನರಿಗೆ ಟೋಪಿ ಹಾಕಿ, ದ್ರೋಹ ಮಾಡಿ ಅಧಿಕಾರಕ್ಕೆ ಬಂದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿ ಈಗ ಹಲವು ಷರತ್ತು ಹಾಕಿ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ಶುಕ್ರವಾರ ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ದ್ರೋಹ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಮೋಸದ ವಿರುದ್ಧ ಸದನದ ಹೊರಗೆ ಒಳಗೆ ನಾವು ಹೋರಾಟ ಮಾಡುತ್ತೇವೆ ಎಂದರು.

ಅಧಿವೇಶನ ಆರಂಭದಿಂದ ಮುಗಿಯುವವರೆಗೂ ಧರಣಿ ಮಾಡುತ್ತೇವೆ. ರಾಜ್ಯದ ಎಲ್ಲಾ ಕಡೆಯಿಂದ ಬಂದು ಪ್ರತಿಭಟನೆ ಮಾಡಲಿದ್ದೇವೆ. ಸರ್ಕಾರದ ಕೊಟ್ಟ ಯೋಜನೆ ಜಾರಿ ಮಾಡಬೇಕು ಇಲ್ಲ ಎಂದರೆ ಅಧಿಕಾರದಲ್ಲಿ ಒಂದು ನಿಮಿಷನೂ ಅವರು ಇರಬಾರದು. ಅಧಿವೇಶನಕ್ಕೆ ಮುಂಚೆ ವಿಪಕ್ಷನಾಯಕರ ಆಯ್ಕೆ ಮಾಡುತ್ತೇವೆ. ನನಗೆ 81 ವರ್ಷ ಆದರೂ ನಾನು ಹೋರಾಟ ಮಾಡುತ್ತೇನೆ ಎಂಬ ಖಡಾಖಂಡಿತ ಮಾತನ್ನಾಡಿದ್ದಾರೆ.

ಪ್ರಧಾನಿ ಮೋದಿಗೆ ವಿಶ್ವದಲ್ಲಿ ಗೌರವ ಸಿಗುತ್ತಿದೆ. ಈ ಬಾರಿ ಕಳೆದ ಬಾರಿಯಂತೆ ಲೋಕಸಭೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಪಡೆಯುತ್ತೇವೆ. ಇನ್ನು ಯಡಿಯೂರಪ್ಪ ಅವರ ಸ್ಥಾನ ಮಾನದ ಕುರಿತು ಉಳಿದ ಪಕ್ಷಗಳು ಬಿಜೆಪಿ ವಿರುದ್ಧ ಹಲವಾರು ಟೀಕೆಗಳನ್ನು ಮಾಡಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ನನ್ನನ್ನು ಯಾರೂ ನಿರ್ಲಕ್ಷ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದರಲ್ಲಿ ಸತ್ಯಾಂಶ ಏನೂ ಇಲ್ಲ, ನನಗೆ ಎಲ್ಲಾ ಸ್ಥಾನ ಮಾನ ಗೌರವ ಸಿಕ್ಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರೂ ಬೇಕಾದರೂ ಆಕಾಂಕ್ಷಿ ಆಗಬಹುದು, ಸೋಮಣ್ಣ ಆಕಾಂಕ್ಷಿ ಆಗೋದರಲ್ಲಿ ತಪ್ಪೇನಿಲ್ಲ ಎಂದರು.

ಕೇಂದ್ರದಿಂದ ಅಕ್ಕಿ ವಿಳಂಬ ವಿಚಾರ: ಕೆಲ ಭರವಸೆ ಕೊಟ್ಟು ಕಾಂಗ್ರೆಸ್​​ನವರು ಅಧಿಕಾರಕ್ಕೆ ಬಂದಿದ್ದಾರೆ. 15 ಕೆಜಿ ಅಕ್ಕಿಯಲ್ಲಿ 1 ಕೆಜಿಯೂ ಕಡಿಮೆ ಆಗಬಾರದು. ಕಡಿಮೆ ಮಾಡಿದರೆ ನಾವು ಹೋರಾಟ ಮಾಡುತ್ತೇವೆ, ಇನ್ನು ಈ ಸರ್ಕಾರ ಎಷ್ಟು ದಿನ ಇರುತ್ತದೆ ಗೊತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್​ ಸರ್ಕಾರಕ್ಕೆ ಟಕ್ಕರ್​ ನೀಡಿದ್ದಾರೆ.

ಹತ್ತು ಕೆಜಿ ಅಕ್ಕಿ ವಿಚಾರ- ಮೋದಿ ಮೇಲೆ ಗೂಬೆ ಕೂರಿಸುವ ಕೆಲಸ:-ಆರ್ ಅಶೋಕ್ ವಾಗ್ದಾಳಿ: ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರಂಟಿ ಕಾಂಗ್ರೆಸ್ ಯೋಜನೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಗೂಬೆ ಕೂರಿಸುವ ಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅವರು ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಜಿಲ್ಲಾ ಮಟ್ಟದ ಬಿಜೆಪಿ ‌ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ್ದಾರೆ. ಈ ವೇಳೆ ಹತ್ತು ಕೆ.ಜಿ.ಅಕ್ಕಿ ಕೊಡುತ್ತೇವೆ ಎಂದಿದ್ದ ಕಾಂಗ್ರೆಸ್ ಅಕ್ಕಿ‌ ಕೊಡುತ್ತಿಲ್ಲ ಎಂದು ಆರೋಪಿಸಿದರು.

24 ಗಂಟೆಯಲ್ಲಿ ಕೊಡ್ತೇವೆ ಎಂದಿದ್ದ ಅಕ್ಕಿ ಒಂದೂವರೇ ತಿಂಗಳಾದ್ರು ಬಂದಿಲ್ಲ. ಜೊತೆಗೆ ಅಕ್ಕಿ ಕೊಡುತ್ತಿದ್ದೆವು, ಆದರೆ ನರೇಂದ್ರ ಮೋದಿ ಕೊಟ್ಟಿಲ್ಲ ಎಂದು‌ ಕಾಂಗ್ರೆಸ್ ಸಬೂಬು ನೀಡುತ್ತಿದ್ದು ಇದು ಸರಿಯಿಲ್ಲ ಎಂದಿದ್ದಾರೆ. ಈಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಆಗಸ್ಟ್ ತಿಂಗಳಲ್ಲಿ ಅಕ್ಕಿ ನೀಡುತ್ತೇವೆ ಅನ್ನುತ್ತಿದ್ದಾರೆ. ಆದರೆ, ಆಗಸ್ಟ್​ಗೂ ಅಲ್ಲ ಸೆಪ್ಟೆಂಬರ್​ಗೂ ಹತ್ತು ಕೆ.ಜಿ. ಬರಲ್ಲ ಎಂದು ಅಶೋಕ್ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಲೇವಡಿ ಮಾಡಿದರು.

ಇನ್ನು ಅಕ್ಕಿ ಛತ್ತೀಸ್​ಗಢದಿಂದ ಬರುತ್ತಿತ್ತು, ಅಲ್ಲಿ ಮೋದಿ ತಡೆದು ಬಿಟ್ಟರು ಎಂದು ಕಾಂಗ್ರೆಸ್ ಎಲ್ಲದಕ್ಕೂ ಮೋದಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಯಾವ ಗ್ಯಾರಂಟಿಗಳಿಗೂ ವಾರಂಟಿ ಇಲ್ಲ. ಹಾಗೆ ಮೇಕೆದಾಟು ಬಗ್ಗೆ ಸಿಎಂ ಮಾತನಾಡುತ್ತಲೇ ಇಲ್ಲ. ದೊಡ್ಡ ಹೋರಾಟ ಮಾಡಿದ ಕಾಂಗ್ರೆಸ್ ಸುಮ್ಮನೆ ಕುಳಿತಿದೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಏಜೆನ್ಸಿ ಕಪ್ಪು ಪಟ್ಟಿಗೆ: ದಿನೇಶ್ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.