ತುಮಕೂರು : ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ನೈಸರ್ಗಿಕ ಸಂಪನ್ಮೂಲಗಳ ಕಾಮಗಾರಿಗಳ ಕುರಿತಾದ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಅವರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಲಾಯಿತು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕಾನ್ಫರೆನ್ಸ್‌ನಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಅವರು ಜಿಲ್ಲೆಯಲ್ಲಿ ಅಂತರ್ಜಲ ಚೇತನ ಕಾಮಗಾರಿ, ಎನ್ಆರ್ಎಂ, ಪಿಎಂಕೆಎಸ್ವೈ ಕಾಮಗಾರಿಗಳ ಸ್ಥಿತಿಗತಿಗಳ ವಿವರವನ್ನು ನೀಡಿದರು.
ಬಯಲು ಸೀಮೆ ಪ್ರದೇಶ ಪಾವಗಡ ತಾಲೂಕಿನ ವ್ಯಾಪ್ತಿಯಲ್ಲಿ ತೆಗೆದುಕೊಂಡಿರುವ ಕೃಷಿ ಹೊಂಡ ಕಾಮಗಾರಿ, ಅನೇಕ ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಿಸಿರುವುದು ಸೇರಿ ಸರ್ಕಾರದ ಯೋಜನೆಗಳ ಅನುಷ್ಠಾನದ ಮಾಹಿತಿಯನ್ನು ಸಚಿವರಿಗೆ ನೀಡಲಾಯಿತು. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದು ವಿಶೇಷವಾಗಿತ್ತು.