ತುಮಕೂರು: ಜಿಲ್ಲಾ ಪಂಚಾಯತಿ ವಿಶೇಷ ಸಾಮಾನ್ಯ ಸಭೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯಿತಿಯ ಆವರಣದಲ್ಲಿ 11 ಗಂಟೆಗೆ ಪ್ರಾರಂಭವಾಗಬೇಕಿದ್ದ ವಿಶೇಷ ಸಾಮಾನ್ಯ ಸಭೆ 12 ಗಂಟೆಯಾದರೂ ಕೊರಂ ಕೊರತೆಯಿಂದ ಪ್ರಾರಂಭವಾಗಲಿಲ್ಲ. ಇದರಿಂದ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲ ಜಿ.ಪಂ. ಸದಸ್ಯರು ಅಧ್ಯಕ್ಷೆ ಲತಾ ರವಿಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸಭೆ ಪಾರಂಭವಾಗುತಿದ್ದಂತೆ ಜಿಲ್ಲೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯುತ್ತಿದ್ದ ಅವ್ಯವಹಾರ ತಡೆಯಲು 2017-18ನೇ ಸಾಲಿನಲ್ಲಿ ಬಯೋ ಮೆಟ್ರಿಕ್ ಮತ್ತು ಸಿಸಿ ಕ್ಯಾಮರಾ ಅಳವಡಿಸಲು 43ಲಕ್ಷ ರೂ.ಗಳ ವೆಚ್ಚದ ಅನುಮೋದನೆ ನೀಡಲಾಗಿತ್ತು. ಆದರೆ, ಜಿ.ಪಂನ ಸ್ಥಾಯಿ ಸಮಿತಿಯ ಗಮನಕ್ಕೆ ತರದೆ 1ಕೋಟಿ 30ಲಕ್ಷ ಅನುಮೋದನೆ ದೊರೆತಿದೆ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿ, ಇದರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಅಲ್ಲದೇ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿದರು.