ಉಡುಪಿ: ಜಿಲ್ಲೆಯಲ್ಲಿಂದು 14 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1077ಕ್ಕೆ ಏರಿಕೆಯಾಗಿದೆ.
ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ108 ಸೋಂಕಿತರಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ಸೋಂಕಿತರಲ್ಲಿ ಪೊಲೀಸ್, ಆಸ್ಪತ್ರೆ ಸಿಬ್ಬಂದಿ ಕೂಡ ಸೇರಿದ್ದಾರೆ.
ಇಂದು 67 ಸ್ಯಾಂಪಲ್ಗಳ ಪರೀಕ್ಷಾ ವರದಿ ಜಿಲ್ಲಾಡಳಿತದ ಕೈ ಸೇರಿದ್ದು, ಅದರಲ್ಲಿ 53 ಸ್ಯಾಂಪಲ್ಗಳ ವರದಿ ನೆಗೆಟಿವ್ ಬಂದಿವೆ. 14 ಜನರ ಸ್ಯಾಂಪಲ್ ಪಾಸಿಟಿವ್ ಆಗಿದೆ. ಇಂದಿನ ಸೋಂಕಿತರಲ್ಲಿ ಎಂಟು ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇಬ್ಬರ ಸೋಂಕು ಸಂಪರ್ಕ ಪತ್ತೆ ಹಚ್ಚಲಾಗುತ್ತಿದ್ದು, ರೋಗಿ- 6843ರ ಸಂಪರ್ಕದಿಂದ ನಾಲ್ವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.