ETV Bharat / state

ಮುಂದಿನ 3 ವರ್ಷದಲ್ಲಿ 16 ಸಾವಿರ ಪೊಲೀಸ್ ಹುದ್ದೆಗಳ ನೇಮಕಾತಿ: ಗೃಹ ಸಚಿವ ಬೊಮ್ಮಾಯಿ - police recruitment

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ. ರಾಜ್ಯದಲ್ಲಿರುವ ನಾಲ್ಕು ವಿಭಾಗಗಳಲ್ಲಿ ಒಂದೊಂದು ಎಫ್​ಎಸ್​ಎಲ್ ಕೇಂದ್ರ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು.

ಗೃಹ ಸಚಿವ ಬೊಮ್ಮಾಯಿ
ಗೃಹ ಸಚಿವ ಬೊಮ್ಮಾಯಿ
author img

By

Published : Feb 21, 2021, 12:02 AM IST

Updated : Feb 21, 2021, 12:25 AM IST

ಉಡುಪಿ: ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶನಿವಾರ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಲಿದೆ. ಈಗಿರುವ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿದೆ. ಮಾನವ ಮಧ್ಯಸ್ಥಿಕೆ ಇಲ್ಲದ ರೀತಿ ನೇಮಕಾತಿ ಪ್ರಕ್ರಿಯೆ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಗೃಹ ಸಚಿವ ಬೊಮ್ಮಾಯಿ ಭಾಷಣ
ದೇಶದಲ್ಲೇ ಮೊದಲು: ಡಾರ್ಕ್ ವೆಬ್ ಮೂಲಕ ಜನರನ್ನು ಸಂಪರ್ಕಿಸಿ ಡ್ರಗ್ ಪೂರೈಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವನ್ನು ದೇಶದಲ್ಲಿ ಮೊಟ್ಟ ಮೊದಲು ಮಟ್ಟ ಹಾಕಿದ್ದು ಕರ್ನಾಟಕ ಪೊಲೀಸ್. ಇದು ನಿಜಕ್ಕೂ ಹೆಮ್ಮೆಯ ವಿಷಯ ಎಂದು ರಾಜ್ಯ ಪೊಲೀಸರ ಕಾರ್ಯವನ್ನು ಸಚಿವರು ಶ್ಲಾಘಿಸಿದರು. ನಾಲ್ಕು FSL ಕೇಂದ್ರಗಳ ಸ್ಥಾಪನೆ: ರಾಜ್ಯದಲ್ಲಿರುವ ನಾಲ್ಕು ವಿಭಾಗಗಳಲ್ಲಿ ಒಂದೊಂದು ಅತ್ಯಂತ ಸುಸಜ್ಜಿತ ಎಫ್​ಎಸ್​ಎಲ್ ತನಿಖಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಾಜ್ಯದಲ್ಲಿ ಹೆಚ್ವುತ್ತಿರುವ ಸೈಬರ್ ಕ್ರೈಮ್ ಮಟ್ಟ ಹಾಕಲಾಗುವುದು. ಬೆಳಗಾವಿ, ಮೈಸೂರು, ಮಂಗಳೂರು, ಕಲಬುರಗಿ ವಿಭಾಗಗಳಲ್ಲಿ ತಲಾ ಒಂದು ಎಫ್​ಎಸ್​ಎಲ್ ಲ್ಯಾಬ್ ಆರಂಭಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.

ಪೊಲೀಸ್ ಆಡಳಿತದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮಾರ್ಚ್ 31 ರೊಳಗಾಗಿ ಅವರು ವರದಿ ಸಲ್ಲಿಸಲಿದ್ದಾರೆ. ಪೊಲೀಸ್ ವ್ಯವಸ್ಥೆ ಸುಧಾರಿಸಲು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ರು.

ಎಲ್ಲ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಠಾಣೆ
ಹತ್ತು ವರ್ಷಗಳ‌ ಹಿಂದೆ ಸೈಬರ್ ಅಪರಾಧಗಳು ಇರಲಿಲ್ಲ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಪೊಲೀಸ್ ಇಲಾಖೆಗೆ ಇದು ಹೊಸ ಸವಾಲು. ಈ ಅಪರಾಧ ಮಟ್ಟ ಹಾಕಲು ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಕೋಮು ಗಲಭೆ ಸೃಷ್ಠಿ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ ಎಂದು ತಿಳಿಸಿದರು.

ಹೆಬ್ರಿಗೆ ಎರಡು ಠಾಣೆ
ಹೆಬ್ರಿಯಲ್ಲಿ ಎರಡು ಪೊಲೀಸ್ ಠಾಣೆಗಳ ಅಗತ್ಯ ಇದೆ ಎಂದು ಶಾಸಕ ಸುನೀಲ್ ಕುಮಾರ್ ಬೇಡಿಕೆ ಇಟ್ಟಿದ್ದಾರೆ. ಪೊಲಿಸ್ ಠಾಣೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಅಗ್ನಿ ಶಾಮಕ ಠಾಣೆ ಸ್ಥಾಪನೆ ಅಸಾಧ್ಯವಾಗದಿದ್ದರೆ ಅಗ್ನಿ ಶಾಮಕ ಉಪ ಠಾಣೆ ಜೊತೆ ಫೈರ್ ಎಂಜಿನ್ ವಾಹನ ನೀಡಲಾಗುವುದು. ಈ ವಿಷಯಗಳನ್ನು ಬಜೆಟ್​ನಲ್ಲಿ ಘೋಷಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

Last Updated : Feb 21, 2021, 12:25 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.