ಉಡುಪಿ: 182 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ 3218ಕ್ಕೆ ಏರಿಕೆಯಾಗಿದೆ ಹಾಗೂ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಮೃತರ ಸಂಖ್ಯೆ 15ಕ್ಕೆ ತಲುಪಿದೆ.
ಕೊಲ್ಲೂರು ಮೂಲದ 45 ವರ್ಷದ ವ್ಯಕ್ತಿ ಕೆಎಂಸಿ ಆಸ್ಪತ್ರೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಪಾಸಿಟಿವ್ ಎಂದು ತಿಳಿಯುತ್ತಿದ್ದಂತೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಮೃತಪಟ್ಟಿದ್ದು, ಕೋವಿಡ್ ನಿಯಮಾವಳಿ ಪ್ರಕಾರ ಕೊಲ್ಲೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ
ಈವರೆಗೆ 2008 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 1199 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಸುಧೀರ್ ಚಂದ್ರಚೂಡ ಮಾಹಿತಿ ನೀಡಿದ್ದಾರೆ.