ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 22 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದ್ಧಾರೆ.
ಮಹಾರಾಷ್ಟ್ರದಿಂದ ಬಂದ 21 ಜನರಲ್ಲಿ ಸೋಂಕು ಧೃಡವಾಗಿದ್ದು, ಒಬ್ಬರು ಸ್ಥಳೀಯರಿಗೂ ಕೋವಿಡ್ 19 ಪಾಸಿಟಿವ್ ಬಂದಿದೆ. ಗುಜರಾತ್ ಮಹಿಳೆಯ ಸಂಪರ್ಕಕ್ಕೆ ಬಂದ ಓರ್ವ ವ್ಯಕ್ತಿಗೆ ಸೋಂಕು ತಗುಲಿದ್ದು, ಸೋಂಕಿತರ ಪೈಕಿ 13 ಪುರುಷರು, 6 ಮಹಿಳೆಯರು, ಮೂವರು ಮಕ್ಕಳಾಗಿದ್ದಾರೆ.
ಜಿಲ್ಲೆಯಲ್ಲಿ ಈತನಕ 658 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಶನಿವಾರವೂ ಇನ್ನಷ್ಟು ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.