ಉಡುಪಿ: ಜಿಲ್ಲೆಯಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ಗೆ ಸೋಂಕು ತಗಲಿದ್ದು, ಗುರುವಾರ 22 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಅದರಲ್ಲಿ ಮಹಾರಾಷ್ಟ್ರದಿಂದ ಬಂದ 20 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಬ್ಬರು ಸ್ಥಳೀಯ ಆರೋಗ್ಯ ಕಾರ್ಯಕರ್ತರಲ್ಲೂ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ ಪೈಕಿ 11 ಪುರುಷರು 9 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ. ಎಲ್ಲರನ್ನೂ ಜೂನ್ 5 ಮತ್ತು 6ರಂದು ಆಸ್ಪತ್ರೆಗೆ ಸೇರಿಸಲಾಗಿತ್ತು. ರಾಜ್ಯಮಟ್ಟದಿಂದ ವರದಿಯು ಅಧಿಕೃತವಾಗಿ ಗುರುವಾರ ಬಂದಿದ್ದು, ನಾಲ್ಕು ದಿನಗಳ ಮೊದಲೇ ವರದಿಯು ಜಿಲ್ಲಾಡಳಿತದ ಕೈಸೇರಿತ್ತು.
ಜಿಲ್ಲೆಯಲ್ಲಿ ಒಟ್ಟು 658 ಜನರು ಕೊರೊನಾದಿಂದ ಗುಣಮುಖರಾಗಿದ್ದು, 308 ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.