ಉಡುಪಿ: ಉಡುಪಿಯಲ್ಲಿ ಇಂದು 226 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,150 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 4 ಸಾವು ಸಂಭವಿಸಿದ್ದು, ತಾಲೂಕಿನ 65 ಮತ್ತು 45 ವರ್ಷದ ಇಬ್ಬರು ಮಹಿಳೆಯರು ಹಾಗೂ ಕಾರ್ಕಳ ತಾಲೂಕಿನ 84 ವರ್ಷದ ವೃದ್ಧ, ಕುಂದಾಪುರ ತಾಲೂಕಿನ 46 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈವರೆಗೆ ಕೊರೊನಾದಿಂದ 106 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಜಿಲ್ಲೆಯಲ್ಲಿ 328 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಒಟ್ಟು 9,929 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 2115 ಸಕ್ರೀಯ ಪ್ರಕರಣಗಳಿದ್ದು, ಇನ್ನೂ ಜಿಲ್ಲೆಯಲ್ಲಿ 266 ವರದಿ ಬರಲು ಬಾಕಿ ಇದೆ.