ಉಡುಪಿ : ಆಟವಾಡಲೆಂದು ತೆರಳಿದ್ದ 5 ವರ್ಷದ ಬಾಲಕ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕು ಉಪ್ಪೂರು ತೆಂಕಬೆಟ್ಟುವಿನಲ್ಲಿ ನಡೆದಿದೆ. ಲಾರೆನ್ಸ್ ಲೂವಿಸ್ ಮೃತ ಬಾಲಕನಾಗಿದ್ದು, ಉಪ್ಪೂರು ನಿವಾಸಿ ನೋರ್ಮನ್ ಮತ್ತು ಸಿಲ್ವಿಯ ಎಂಬವರ ಪುತ್ರನಾಗಿದ್ದಾನೆ.
ಇಂದು ಬೆಳಗ್ಗೆ ಮನೆಯ ಪಕ್ಕ ಆಟವಾಡುತ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಲಾರೆನ್ಸ್ ಕುಟುಂಬಸ್ಥರು ಕುವೈತ್ನಲ್ಲಿ ವಾಸವಾಗಿದ್ದು, ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಪಿಲಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು, ಇಬ್ಬರು ಪಾರು