ETV Bharat / state

163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮಹಾನುಭಾವ

ಇಲ್ಲೊಬ್ಬ ವ್ಯಕ್ತಿ ಬರೋಬ್ಬರಿ 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾನೆ. ಈ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

163 times violation of quarantine rule, udupi man violation of quarantine rule, quarantine rule violation, quarantine rule violation news, 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘನೆ, ಉಡುಪಿ ವ್ಯಕ್ತಿ 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘನೆ, ಕ್ವಾರಂಟೈನ್ ನಿಯಮ ಉಲ್ಲಂಘನೆ, ಕ್ವಾರಂಟೈನ್ ನಿಯಮ ಉಲ್ಲಂಘನೆ ಸುದ್ದಿ,
163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮಹಾನುಭಾವ
author img

By

Published : Jul 14, 2020, 8:03 AM IST

ಉಡುಪಿ: ವ್ಯಕ್ತಿಯೊಬ್ಬ ಒಂದಲ್ಲ, ಎರಡಲ್ಲ, ಬರೋಬ್ಬರಿ 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಕಂಡು ಬಂದಿದೆ.

ಕುಂದಾಪುರದಲ್ಲಿ ಹೋಂ ಕ್ವಾರಂಟೈನ್​​​​ನಲ್ಲಿ ಇದ್ದ ಸಹಬ್‌ ಸಿಂಗ್‌ ಮುಂಬೈನಿಂದ ಕೋಟೇಶ್ವರಕ್ಕೆ ಬಂದಿದ್ದನು. ನಿಯಮ ಉಲ್ಲಂಘಿಸಿ, ಹೊರಗಡೆ ತಿರುಗಾಡುತ್ತಿದ್ದ ಈತನ‌‌ ವಿರುದ್ಧ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರದಲ್ಲಿ ಗ್ಲಾಸ್‌ ಮತ್ತು ಫ್ಲೈ ವುಡ್‌ ವ್ಯವಹಾರ ನಡೆಸುತ್ತಿದ್ದ ಈತ ಜೂ. 29 ರಂದು ಕೋಟೇಶ್ವರ ಬೈಪಾಸ್‌ ಬಳಿಯ ಬಾಡಿಗೆ ಮನೆಗೆ ಬಂದಿದ್ದ. ಜು.13 ರವರೆಗೆ ಹೋಂ ಕ್ವಾರಂಟೈನ್‌ ಮಾಡಲಾಗಿತ್ತು. ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ, ಉಡುಪಿಯ ಹೋಟೆಲ್‌ಗ‌ಳಿಗೆ ತಿರುಗಾಡುತ್ತಿದ್ದ ಎನ್ನಲಾಗಿದೆ.

ಒಟ್ಟು 163 ಬಾರಿ ಹೊರಗೆ ಬಂದ ಬಗ್ಗೆ ಮೊಬೈಲ್ ಜಿಪಿಎಸ್‌ ಟ್ರ್ಯಾಕರ್‌ನಿಂದ ಮಾಹಿತಿ ಲಭ್ಯವಾಗಿತ್ತು. ಸಹಬ್‌ ಸಿಂಗ್‌ ವಿರುದ್ಧ ಐಪಿಸಿ ಸೆಕ್ಷನ್‌ 269, 270 ರಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.