ಉಡುಪಿ: ಕೊರೊನಾ ಇದೆ ಎಂದು ತಪ್ಪು ತಿಳಿದ ವ್ಯಕ್ತಿವಯೋರ್ವ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ.
ಗೋಪಾಲಕೃಷ್ಣ ಮಡಿವಾಳ (56) ನೇಣಿಗೆ ಶರಣಾಗಿರುವ ವ್ಯಕ್ತಿ. ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ ಘಟನೆ ನಡೆದಿದ್ದು, ಮನೆಯ ಹಿಂಭಾಗದಲ್ಲಿ ಈತ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನರ್ನಾಡು ನಿವಾಸಿಯಾಗಿರುವ ಗೋಪಾಲಕೃಷ್ಣ ಮೃತದೇಹವನ್ನು ಮಣಿಪಾಲ ಕೆಎಂಸಿಗೆ ರವಾನಿಸಲಾಗಿದೆ. ಕೆಎಸ್ಆರ್ ಟಿಸಿ ಬಸ್ ಟ್ರೈನರ್ ಆಗಿ ಇವರು ಕೆಲಸ ಮಾಡುತ್ತಿದ್ದರು. ಅಲ್ಲದೆ ಗೋಪಾಲಕೃಷ್ಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.