ಉಡುಪಿ: ಬಹು ಕೋಟಿ ಹಣ ವಂಚನೆ ಪ್ರಕರಣ ಸಂಬಂಧ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ವಾರದ ಹಿಂದೆ ಬ್ಯಾಂಕಿನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರು ಬ್ಯಾಂಕ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.
ಈ ಘಟನೆ ಸಂಬಂಧ ವಂಚನೆ ಆರೋಪದ ಮೇಲೆ ಲಕ್ಷ್ಮಿ ನಾರಾಯಣ ಮೇಲೆ ಪ್ರಕರಣ ದಾಖಲಾಗಿತ್ತು. ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ಲಕ್ಷ್ಮಿ ನಾರಾಯಣನ್ನು ಬಂಧಿಸಿ, ಉಡುಪಿ ಜೆಎಂಎಫ್ಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಆರೋಪಿಗೆ ಜನವರಿ11 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಸುಮಾರು 600 ಠೇವಣಿದಾರರ 93 ಕೋಟಿ ರೂಪಾಯಿ ವಂಚನೆ ಆರೋಪದ ವಿರುದ್ದ ತನಿಖೆ ಮುಂದುವರಿದಿದೆ.
ಇದನ್ನೂ ಓದಿ: ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಕರ್ನಾಟಕ ವಿವಿಗೆ ರಜೆ ಘೋಷಣೆ