ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಂಪತ್ ಪೂಜಾರಿ (17) ರೈಲು ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿ.
ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು: ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ವಿದ್ಯಾರ್ಥಿ ಸಂಪತ್ ರೈಲು ಹಳಿ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲು ಅಧಿಕಾರಿಗಳು, ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
(ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಫೋಟೋಶೂಟ್ನಲ್ಲಿ ಮೈಮರೆತ ಬಾಲಕ.. ದಾವಣಗೆರೆಯಲ್ಲಿ ದುರಂತ)