ಉಡುಪಿ: ಭಾರೀ ಗಾಳಿ ಮಳೆಗೆ ಮರ ಬಿದ್ದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಹೆಬ್ರಿ ಸಮೀಪದ ಬೆಳಂಜೆ ಎಂಬಲ್ಲಿ ನಡೆದಿದೆ.
ಕಾರ್ಕಳ ಹೆಬ್ರಿಯಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಕಾರ್ಕಳದಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಪ್ರಸಾದ್ ಶೆಟ್ಟಿ ಮೇಲೆ ಮರ ಉರುಳಿದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.