ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಆಟೊ ಡಿಕ್ಕಿ ಹೊಡೆದ ಪರಿಣಾಮ, ಆಟೊ ಚಾಲಕ ರಸ್ತೆಗೆಸೆಯಲ್ಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಉಡುಪಿಯ ಅಂಬಾಗಿಲು ಸಮೀಪ ಈ ಘಟನೆ ಸಂಭವಿಸಿದ್ದು, ಚಾಲಕ ಸುನೀಲ್ ಅತೀ ವೇಗದಲ್ಲಿ ಆಟೊ ಚಲಾಯಿಸುತ್ತಿದ್ದ ಕಾರಣ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗುದ್ದಿದ ರಭಸಕ್ಕೆ ಆಟೋ ನುಜ್ಜುಗುಜ್ಜಾಗಿದ್ದು, ಚಾಲಕ ರಸ್ತೆಗೆಸೆಯಲ್ಪಟ್ಟಿದ್ದ.
ಈ ವೇಳೆ ಸ್ಥಳದಲ್ಲಿದ್ದ ಜನರು ಕೂಡಲೇ ಸುನೀಲ್ನನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದು, ಮಾರ್ಗ ಮಧ್ಯೆಯೇ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.