ETV Bharat / state

ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜಬರ್ದಸ್ತ್ ಸ್ಟೆಪ್ - ಈ ಬಾರಿ ಹುಲಿವೇಷಗಳಿಗೆ ಅವಕಾಶ ನೀಡದ ಜಿಲ್ಲಾಡಳಿತ

ಬೈಲೂರು ನೀಲಕಂಠ ಮಹಾಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜ್ಯೂನಿಯರ್ ಫ್ರೆಂಡ್ಸ್​​ನ ಲೋಬಾನ ಹಾಕುವ ಸಂಪ್ರದಾಯದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭಾಗವಹಿಸಿದ್ದರು.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜಬರ್ದಸ್ತ್ ಸ್ಟೆಪ್

author img

By

Published : Aug 31, 2021, 10:40 PM IST

ಉಡುಪಿ: ಸ್ಯಾಂಡ್ ವುಡ್ ನಟ ರಕ್ಷಿತ್ ಶೆಟ್ಟಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿ ಸಂದರ್ಭದಲ್ಲೂ ಕೂಡ ಹುಲಿವೇಷ ಕುಣಿದಿದ್ದಾರೆ. ಕೊರೊನಾ ಕಾರಣದಿಂದ ಉಡುಪಿಯಲ್ಲಿ ಈ ಬಾರಿ ಸರಳ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಉಡುಪಿಯ ಅಷ್ಟಮಿ ಅಂದರೆ ಹುಲಿವೇಷಗಳ ಕಲರವ ಇದ್ದೇ ಇರುತ್ತದೆ. ಆದರೆ, ಈ ಬಾರಿ ವೇಷಗಳಿಗೆ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜಬರ್ದಸ್ತ್ ಸ್ಟೆಪ್

ದೇವಸ್ಥಾನಗಳಿಂದ, ದೈವಸ್ಥಾನಗಳಿಂದ ಹೊರಡುವ ಹುಲಿವೇಷ ತಂಡಗಳು ಸಾಂಪ್ರದಾಯಿಕ ಲೋಬಾನ ಹಾಕುವ ಆಚರಣೆಯನ್ನು ಮಾತ್ರ ಮಾಡಿವೆ. ಬೈಲೂರು ನೀಲಕಂಠ ಮಹಾಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜ್ಯೂನಿಯರ್ ಫ್ರೆಂಡ್ಸ್​​ನ ಲೋಬಾನ ಹಾಕುವ ಸಂಪ್ರದಾಯದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭಾಗವಹಿಸಿದ್ದರು. ದೈವಸ್ಥಾನದ ಹುಲಿವೇಷ ತಂಡದ ಯುವಕರ ಜೊತೆ ರಕ್ಷಿತ್ ಶೆಟ್ಟಿ ಜಬರ್ದಸ್ತ್ ಸ್ಟೆಪ್ ಹಾಕಿದ್ದಾರೆ. ಪಕ್ಕಾ ವೇಷಧಾರಿಗಳಂತೆ ಕುಣಿದು ಸಂಭ್ರಮಿಸಿದರು.

ಉಳಿದವರು ಕಂಡಂತೆ ಚಿತ್ರಕ್ಕೂ ಮೊದಲು ಇದೇ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಇಲ್ಲಿನ ತಂಡವನ್ನು ರಕ್ಷಿತ್ ಚಿತ್ರೀಕರಣಕ್ಕೆ ಕರೆದೊಯ್ದಿದ್ದರು. ಚಿತ್ರದ ಸಕ್ಸಸ್ ಹಿಂದೆ ಬಬ್ಬುಸ್ವಾಮಿ ಕೊರಗಜ್ಜ ದೈವದ ಆಶೀರ್ವಾದ ಕೂಡ ಇದೆ ಎಂದು ರಕ್ಷಿತ್ ಶೆಟ್ಟಿ ಬಲವಾಗಿ ನಂಬಿದ್ದಾರೆ.

ಪ್ರತಿ ವರ್ಷ ಅಷ್ಟಮಿ ಸಂದರ್ಭ ದೈವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಮತ್ತು ಪ್ರಾಂಗಣದಲ್ಲಿ ಹುಲಿ ಕುಣಿಯುವ ಸಂಪ್ರದಾಯ ನಡೆಸಿಕೊಂಡು ಬರುತ್ತಿದ್ದಾರೆ.

ಇದನ್ನೂ ಓದಿ : ಕೃಷ್ಣನಗರಿ ಉಡುಪಿಯಲ್ಲಿ ನಾಳೆ ಜನ್ಮಾಷ್ಟಮಿ ಸಂಭ್ರಮ: ಮಠದಲ್ಲಿ ಸಕಲ ಸಿದ್ಧತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.