ಉಡುಪಿ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಶಿವರಾತ್ರಿ ಪೂಜೆ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಪೂಜಾಪದ್ಧತಿಯ ಬಗ್ಗೆ ಮಾಧ್ವ, ಶೈವ ಗುಂಪುಗಳ ನಡುವೆ ಜಿಜ್ಞಾಸೆ ಮೂಡಿದ್ದು, ಎರಡೂ ಗುಂಪಿನವರನ್ನು ಕರೆದು ಮಾತನಾಡುವೆ ಎಂದು ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೋಮವಾರ ಈ ಬಗ್ಗೆ ಸಭೆ ನಡೆಸಲಾಗುವುದು. ಶಿವನ ಅಂಶ ಇರುವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆ ಮಾಡಲು ಇಲಾಖೆ ಸೂಚಿಸುತ್ತದೆ. ಕುಕ್ಕೆಯಲ್ಲಿ ಈ ಬಗ್ಗೆ ಚರ್ಚೆ ಇದ್ದರೆ ಆಗಮ ಪಂಡಿತರು ತೀರ್ಮಾನ ಕೈಗೊಳ್ಳುತ್ತಾರೆ. ದೇವಸ್ಥಾನ, ಮುಜರಾಯಿ ಇಲಾಖೆಯ ಆಗಮ ಪಂಡಿತರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಅಷ್ಟಮಂಗಲದ ವಿಚಾರಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಗಮನಿಸುತ್ತದೆ. ಈ ಬಗ್ಗೆ ನಮ್ಮ ಮೇಲೆ, ಇಲಾಖೆ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದರು.