ಉಡುಪಿ: ಕುಂದಾಪುರದ ಹೆಮ್ಮಾಡಿಯ ಬಗ್ವಾಡಿ ಸಮೀಪದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ.
ದೇವಲ್ಕುಂದದಲ್ಲಿರುವ ಮಲ್ಪೆ ಫ್ರೆಶ್ ಮರೈನ್ ಎಕ್ಸ್ಪೋರ್ಟ್ ಪ್ರೈ. ಲಿ.ನ ಘಟಕದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.
ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಕಾರ್ಮಿಕರಿಗೆ ವಾಂತಿ ಮತ್ತು ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ತಕ್ಷಣ ತೀವ್ರವಾಗಿ ಅಸ್ವಸ್ಥರಾಗಿದ್ದ ಇಪ್ಪತ್ತು ಜನರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಅಮೋನಿಯಾ ಅನಿಲ ಸೋರಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳಕ್ಕೆ ಕಂಡ್ಲೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ರೀಧರ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಮೋನಿಯಾ ಬಳಕೆ ಏಕೆ?:
ಮೀನನ್ನು ಫ್ರೀಜ್ ಮಾಡಲು ಅಮೋನಿಯಾವನ್ನು ಬಳಸಲಾಗುತ್ತದೆ. ಮೀನನ್ನು ಹೆಚ್ಚುದಿನ ಕೆಡದಂತೆ ಮಾಡಲು ಅಮೋನಿಯಾ ಬಳಸುತ್ತಾರೆ.