ಉಡುಪಿ: ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಆದಾಯ 4 ಕೋಟಿ ರೂಪಾಯಿ ಕಡಿಮೆಯಾಗಿದೆ.
ಕಳೆದ ಆರ್ಥಿಕ ವರ್ಷದಲ್ಲಿ 8 ಕೋಟಿ 29 ಲಕ್ಷ ರೂ. ಸಂಗ್ರಹವಾಗಿತ್ತು. ಈ ಬಾರಿ 4 ಕೋಟಿ 10 ಲಕ್ಷ ರೂಪಾಯಿ ಸಂಗ್ರವಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ತಿಳಿಸಿದೆ.
ಕಳೆದ ಬಾರಿ ಕೊರೊನಾ ಕಾರಣದಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿಯೂ ಮತ್ತೆ ಕೊರೊನಾ ಹಾವಳಿಯಿಂದ ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಇಳಿಕೆಯಾಗಿದೆ.
ಕೇರಳ ಮತ್ತು ತಮಿಳುನಾಡಿನ ಭಕ್ತರೇ ಹೆಚ್ಚು ಆಗಮಿಸುವ ಕೊಲ್ಲೂರು ಮೂಕಾಂಬಿಕಾ ದೇವಾಸ್ಥಾನದ ಆದಾಯಕ್ಕೆ ಕೊರೊನಾ ದೊಡ್ಡ ಹೊಡೆತ ನೀಡಿದೆ.