ETV Bharat / state

'ಸಿಗಂದೂರು ದೇಗುಲವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆಯಬಾರದು'

author img

By

Published : Oct 27, 2020, 4:11 PM IST

ಹಲವಾರು ವರ್ಷಗಳಿಂದ ಬಿಲ್ಲವ ಈಡಿಗ ಸಮುದಾಯಕ್ಕೆ ಸೇರಿದ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಯಾವುದೇ ಕಾರಣಕ್ಕೆ ಸರಕಾರದ ವಶಕ್ಕೆ ಪಡೆಯಬಾರದು ಎಂದು ಬಿಲ್ಲವ ಯುವ ವೇದಿಕೆಯ ಪದಾಧಿಕಾರಿಗಳು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಸಲ್ಲಿಕೆ
ಮನವಿ ಸಲ್ಲಿಕೆ

ಉಡುಪಿ: ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲವನ್ನು ಸರಕಾರದ ಮುಜರಾಯಿ ಇಲಾಖೆಯ ವಶಕ್ಕೆ ಪಡೆಯಬಾರದೆಂದು ಉಡುಪಿ ಜಿಲ್ಲಾ ಬಿಲ್ಲವ ವೇದಿಕೆ ಪ್ರವೀಣ್ ಪೂಜಾರಿ ನೇತೃತ್ವದ ತಂಡ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ನೀಡಿದೆ.

ಹಲವಾರು ವರ್ಷಗಳಿಂದ ಬಿಲ್ಲವ ಈಡಿಗ ಸಮುದಾಯಕ್ಕೆ ಸೇರಿದ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಯಾವುದೇ ಕಾರಣಕ್ಕೆ ಸರಕಾರದ ವಶಕ್ಕೆ ಪಡೆಯಬಾರದು. ಯಥಾಸ್ಥಿತಿಯಲ್ಲಿ ಧಾರ್ಮಿಕ ವಿಧಿ-ವಿಧಾನಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂಬ ಕುರಿತು ಬಿಲ್ಲವ ಯುವ ವೇದಿಕೆಯ ಪದಾಧಿಕಾರಿಗಳು ಕೋಟಾ ಶ್ರೀನಿವಾಸ ಪೂಜಾರಿಯವರಲ್ಲಿ ವಿನಂತಿಸಿಕೊಂಡಿದ್ದಾರೆ.

ಈ ಮನವಿ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ, ಸಂಬಂಧಪಟ್ಟವರಲ್ಲಿ ನಾನು ಮಾತುಕತೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತದೆ. ನಿಮ್ಮ ಮನವಿಗೆ ನಾನು ಸ್ಪಂದಿಸುತ್ತೇನೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.