ಉಡುಪಿ: ಕುಂದಾಪುರ ತಾಲೂಕಿನ ಬೀಜಾಡಿ-ವಕ್ವಾಡಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.
ಕುಂದಾಪುರದ ಮೊಹಮ್ಮದ್ ಸಫಾನ್(32), ಮೊಹಮ್ಮದ್ ಅಮೀರ್ ಹುಸೇನ್ (19), ಮಂಗಳೂರು ಪೆರ್ಮುದೆ ನಿವಾಸಿ ಅಬ್ದುಲ್ ರೆಹಮಾನ್ ಮಿಯಾಜ್(21) ಬಂಧಿತ ಆರೋಪಿಗಳು. ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಇವರು ಪೊಲೀಸರನ್ನು ನೋಡಿ ಓಡಲು ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸುತ್ತುವರೆದು ವಿಚಾರಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಆರೋಪಿಗಳಿಂದ 6,500 ರೂ. ಮೌಲ್ಯದ 195 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ ವ್ಯಕ್ತಿಯಿಂದ ಗಾಂಜಾ ಖರೀದಿಸಿ ಮಾರಾಟ ಯತ್ನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳಿಗೆ ಸೇರಿದ ದ್ವಿಚಕ್ರ ವಾಹನವನ್ನೂ ಸಹ ವಶಕ್ಕೆ ಪಡೆಯಲಾಗಿದೆ.