ಉಡುಪಿ: ನಗರದ ಕೋರ್ಟ್ ಆವರಣದಲ್ಲಿ ಗುರುಪ್ರಸಾದ್ ಎಂಬ ವಕೀಲರ ಮೇಲೆ ಹಲ್ಲೆ ನಡೆಸಿದ ಶಾಹೀದ್ ಮಂಚಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಮೋಟಾರು ವಾಹನ ಪ್ರಕರಣದಲ್ಲಿ ಶಾಹೀದ್ ಕೋರ್ಟ್‌ನಲ್ಲಿ ಸಾಕ್ಷಿ ಹೇಳಲು ಬಂದಿದ್ದರು. ಬೆಳಗ್ಗೆಯಿಂದ ಸಂಜೆಯವರೆಗೆ ಕಾದು ಕುಳಿತ ನಂತರ ನ್ಯಾಯಾಧೀಶರು ಪ್ರಕರಣವನ್ನು ಮುಂದೂಡಿದ್ದರು. ಇದೇ ವಿಷಯಕ್ಕೆ ಶಾಹೀದ್ ವಕೀಲರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ವಕೀಲರ ಸಂಘದಿಂದ ಆಕ್ರೋಶ ವ್ಯಕ್ತವಾಗಿತ್ತು. ಕೋರ್ಟ್ ಆವರಣದಲ್ಲಿ ಆರೋಪಿ ಮತ್ತು ಇತರ ವಕೀಲರ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ರಷ್ಯಾ ಪರ ಗೂಢಚಾರಿಕೆ ಶಂಕೆ: ಉಕ್ರೇನ್ ಸಂಧಾನ ನಿಯೋಗದ ಸದಸ್ಯನ ಹತ್ಯೆ