ಉಡುಪಿ: ಇಲ್ಲಿನ ಕ್ರೈಸ್ತ್ ಧರ್ಮ ಪ್ರಾಂತ್ಯದಲ್ಲಿ ಬರುವ ಎಲ್ಲಾ ಚರ್ಚ್ಗಳಲ್ಲಿ ಕೊರೊನಾ ಜಾಗೃತಿ ಮೂಡಿಸಬೇಕೆಂದು ಉಡುಪಿ ಜೆರಾಲ್ಡ್ ಐಸಾಕ್ ಲೋಬೊ ಆದೇಶ ಹೊರಡಿಸಿದ್ದಾರೆ.
ಶನಿವಾರ ಮತ್ತು ಭಾನುವಾರದ ವಿಶೇಷ ಪ್ರಾರ್ಥನೆಯ ವೇಳೆ ಧರ್ಮಗುರುಗಳು ಚರ್ಚ್ನಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಿದರು. ಚರ್ಚ್ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಮನೆಗಳಲ್ಲಿ ಯಾವ ರೀತಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಪಾಠ ಮಾಡಿದರು. ಗಲ್ಫ್ ರಾಷ್ಟ್ರಗಳಲ್ಲಿ ಇರುವ ಕ್ರೈಸ್ತ ಧರ್ಮೀಯರು ಕೆಲ ದಿನಗಳು ಅಲ್ಲೇ ಇದ್ದು, ವೈರಸ್ ಭೀತಿ ನಿವಾರಣೆಯಾದ ಬಳಿಕ ಭಾರತಕ್ಕೆ ವಾಪಸ್ ಬರುವಂತೆ ಕರೆ ನೀಡಿದ್ದಾರೆ.
ಕೊರೊನಾ ವಿರುದ್ಧ ಮನುಷ್ಯರಿಗೆ ಹೋರಾಡಲು ವಿಶೇಷ ಶಕ್ತಿ ಬರುವಂತೆ ಬೈಬಲ್ನ ಕೆಲ ಅಧ್ಯಾಯಗಳ ಪಠಣವನ್ನು ಭಾನುವಾರದ ಪೂಜೆಯ ಸಂದರ್ಭ ಮಾಡಲಾಯಿತು. ಸ್ವತಃ ಉಡುಪಿಯ ಬಿಷಪ್ ಕೆಲ ಚರ್ಚ್ಗಳಿಗೆ ಭೇಟಿ ಕೊಟ್ಟು ಕೊರೊನಾ ವಿರುದ್ಧ ಜನಜಾಗೃತಿ ಮೂಡಿಸಿದ್ದಾರೆ. ಮುಂದಿನ ಶುಕ್ರವಾರ ಒಂದು ದಿನ ನಿರಂತರವಾಗಿ ಕೊರೊನಾ ವೈರಸ್ನ ಬಗ್ಗೆ ಮುಂಜಾಗೃತಾ ಕ್ರಮಗಳ ಬಗ್ಗೆ ಭಕ್ತರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಚರ್ಚ್ಗಳಲ್ಲಿ, ಕ್ರೈಸ್ತ್ ಸಂಸ್ಥೆಗಳಲ್ಲಿ ಕಾರ್ಯಾಗಾರವನ್ನು ನಡೆಸಲು ಧರ್ಮಪ್ರಾಂತ್ಯದ ಗುರುಗಳು ತೀರ್ಮಾನಿಸಿದ್ದಾರೆ.