ಉಡುಪಿ: ಕೊರೊನಾ ಎರಡನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಗಡಿ ರಾಜ್ಯಗಳಿಂದ ಬರುವ ಸಂಚಾರವನ್ನು ಪ್ರಮುಖ ಮಾರ್ಗಗಳಿಗೆ ಸೀಮಿತಗೊಳಿಸಿ, ಉಳಿದ ರಸ್ತೆಗಳನ್ನು ಬಂದ್ ಮಾಡುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಕೇರಳ ಮತ್ತು ಮಹಾರಾಷ್ಟ್ರ ಜೊತೆ ನಮ್ಮ ಜಿಲ್ಲೆಗಳಿಗೆ ವ್ಯಾಪಾರ ಸಂಬಂಧವಿದೆ. ಕೆಲ ಪ್ರದೇಶಗಳಲ್ಲಿ ದಿನನಿತ್ಯದ ಓಡಾಟವೂ ಇದೆ. ಹಾಗಾಗಿ ಗಡಿ ಜಿಲ್ಲೆಗಳಿಗೆ ಕೆಲವೊಂದು ನಿರ್ಬಂಧ ಹಾಕಲು ಉನ್ನತಮಟ್ಟದ ಚರ್ಚೆಯಾಗಿದೆ ಎಂದರು.
ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಎಲ್ಲರಿಗೂ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಟೆಸ್ಟ್ ಸರ್ಟಿಫಿಕೇಟ್ಗಳನ್ನು ತರಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇವೆ. ಮಹಾರಾಷ್ಟ್ರ- ಕೇರಳ - ಆಂಧ್ರ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ಐಎಂಎ ಮುಖ್ಯಸ್ಥ ಮನ್ಸೂರ್ನಿಂದ ಸಿದ್ದರಾಮಯ್ಯ - ಹೆಚ್ಡಿಕೆಗೆ ಹಣ ಸಂದಾಯ ವಿಚಾರದ ಕುರಿತು ಮಾತನಾಡಿ, ಐಎಂಎ ಪ್ರಕರಣವನ್ನು ಸಿಬಿಐ ತನಿಖೆ ಮಾಡ್ತಾ ಇದೆ. ನಮ್ಮ ರಾಜ್ಯದ ಪೊಲೀಸರು ತನಿಖೆ ಮಾಡುತ್ತಿಲ್ಲ. ಹೀಗಾಗಿ ವಿಚಾರಣೆಯ ಅಂಶಗಳು ನನ್ನ ಗಮನಕ್ಕೆ ಬಂದಿಲ್ಲ ಎಂದರು.