ಉಡುಪಿ: ಇನ್ಸುಲೇಟರ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಹೂಡೆ ನಿವಾಸಿ ಇಸಾಕ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ವಡಬಾಂಡೇಶ್ವರ ತೊಟ್ಟಂ ರಸ್ತೆಯ ತಿರುವಿನಲ್ಲಿ ಇನ್ಸುಲೇಟರ್ ವಾಹನ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.