ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕೆ ಮುಗಿಸಿ ಹಿಂದಿರುತ್ತಿದ್ದ ಬೋಟೊಂದು ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಭಾರತಿ ತಿಂಗಳಾಯ ಎಂಬುವವರಿಗೆ ಸೇರಿದ ಶ್ರೀನವಶಕ್ತಿ ಹೆಸರಿನ ಬೋಟು ಅ.25ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ, ಮಲ್ಪೆ ಬಂದರಿನಿಂದ ಸ್ವಲ್ಪ ದೂರದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಕಲ್ಲಿಗೆ ಬಡಿದಿದೆ. ಇದರಿಂದ ಬೋಟಿನ ಅಡಿಭಾಗ ಸಂಪೂರ್ಣ ಹಾನಿಗೊಂಡು ನೀರು ಬೋಟಿನ ಒಳಹೊಕ್ಕು ಸಂಪೂರ್ಣ ಮುಳುಗುವ ಸ್ಥಿತಿಗೆ ತಲುಪಿತ್ತು.
ತಕ್ಷಣ ಸಮೀಪದಲ್ಲಿದ್ದ ಬೇರೆ ಹಡಗಿನವರು ಬೋಟ್‌ನಲ್ಲಿದ್ದ ಮೀನುಗಾರರನ್ನು ರಕ್ಷಿಸಿ ಬೋಟ್ ಅನ್ನು ಮಲ್ಪೆ ಬಂದರಿಗೆ ಎಳೆದು ತಂದಿದ್ದಾರೆ. ಮೀನು, ಬಲೆ ಹಾಗೂ ಇನ್ನಿತರ ಸಲಕರಣೆಗಳು ಸಮುದ್ರ ಪಾಲಾಗಿದ್ದು, ಒಟ್ಟು 20 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಂಠೀರವ ಸ್ಟುಡಿಯೋದ ಅಪ್ಪನ ಸಮಾಧಿಯ ಪಕ್ಕದಲ್ಲೇ ಅಪ್ಪು ಅಂತ್ಯಕ್ರಿಯೆ..