ಮಲ್ಪೆ : ಬಾಲಕನೋರ್ವ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದಲ್ಲಿ ನಡೆದಿದೆ.
10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಗೌತಮ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಈತ ಲಕ್ಷ್ಮೀನಗರ ಗರ್ಡೆ ನಿವಾಸಿಯಾಗಿದ್ದು, ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.