ETV Bharat / state

ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್​​ನ ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

car-accident-in-udupi-news
ಚಾಲಕಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು
author img

By

Published : Mar 4, 2021, 3:48 PM IST

ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಲಾಗಿದ್ದ ಸೆಕೆಂಡ್‌ ಹ್ಯಾಂಡ್ ವಾಹನಗಳಿಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಚಾಲಕಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

ಇದನ್ನೂ ಓದಿ: ಸದನದಲ್ಲಿ ಶರ್ಟ್ ಬಿಚ್ಚಿ ಅಶಿಸ್ತು: ಒಂದು ವಾರಗಳ ಕಾಲ ಶಾಸಕ ಸಂಗಮೇಶ್ ಅಮಾನತು

ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮೀಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿವೆ. 5 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ.

ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳಾಗಿಲ್ಲ. ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್​​ನ ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.