ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಯಾಣಿ ಹೋಟೆಲ್ ಮುಂಭಾಗ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ಕಂಬ ಮೂರು ತುಂಡಾಗಿ ಬಿದ್ದಿದೆ. ಕಾರಿನಲ್ಲಿ ಇಬ್ಬರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ತಂತಿಗೆ ಬೈಕ್ ತಗುಲಿದ ಪರಿಣಾಮ ಬೈಕ್ ಮತ್ತು ಸವಾರ ಸುಟ್ಟು ಕರಕಲಾದ ಘಟನೆ ಮಾಸುವ ಮುನ್ನವೇ ಈ ಘಟನೆ ಸಂಭವಿಸಿದೆ.