ಉಡುಪಿ: ಎಸ್ಡಿಎಂ ಸಂಸ್ಥೆ ಆಯುರ್ವೇದ ವಿಚಾರದಲ್ಲಿ ಮಹತ್ವದ ಹೆಜ್ಜೆ ಇರಿಸಿದೆ ಎಂದು ಕೇಂದ್ರ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನಾವಾಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಉಡುಪಿಯಲ್ಲಿ ರತ್ನಶ್ರೀ ಆರೋಗ್ಯಧಾಮ ಆಯುರ್ವೇದ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.
ಸೇವಾ ಸಮರ್ಪಣೆ ಮನೋಭಾವದ ವೀರೇಂದ್ರ ಹೆಗ್ಗಡೆಯವರಿಂದ ಇಷ್ಟೆಲ್ಲಾ ಸಾಧನೆ ಸಾಧ್ಯವಾಗಿದೆ. ಆಯುರ್ವೇದ ವೈದ್ಯ ಪದ್ಧತಿಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಲಿದೆ. ಕಳೆದ 7 ವರ್ಷದಲ್ಲಿ ಆಯುಷ್ ಇಲಾಖೆ ದೇಶಾದ್ಯಂತ ಬಹಳ ವಿಸ್ತಾರವಾಗಿ ಬೆಳೆದಿದೆ. ಎಲ್ಲಾ ರೋಗಗಳಿಗೂ ಆಯುರ್ವೇದ ಚಿಕಿತ್ಸೆ ಫಲಕಾರಿಯಾಗಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಸಂಶೋಧನೆಗಳು, ಪ್ರಯೋಗಗಳು ನಡೆಯುತ್ತಿದೆ. ಆಯುರ್ವೇದ ಬಗೆಗಿನ ವಿಶ್ವಾಸಾರ್ಹತೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಜನರಲ್ಲಿ ನಂಬಿಕೆ ಬರುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.
ಇದನ್ನು ಓದಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು : ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ