ಕಾಪು: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಕುರಾಲು ಜನವಸತಿ ಪ್ರದೇಶದಲ್ಲಿ ಜನರಿಗೆ ಭಯ ಹುಟ್ಟಿಸುತ್ತಿದ್ದ ಚಿರತೆಯೊಂದು ರವಿವಾರ ತಡರಾತ್ರಿ ಬೋನಿಗೆ ಬಿದ್ದಿದ್ದು, ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕುರಾಲ್ ರೆನ್ನಿ ಕುಂದರ್ ಎಂಬವರ ಮನೆ ಬಳಿ ಚಿರತೆಯ ಓಡಾಟದ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯೋನ್ಮುಖರಾಗಿ, ಚಿರತೆಯ ಬೇಟೆಗಾಗಿ ಬೋನ್ ಇರಿಸಿದ್ದರು. ನರಭಕ್ಷಕ ಚಿರತೆ ಬೇಟೆಗಾಗಿ ಬಂದ ವೇಳೆ ಬೋನಿಗೆ ಬಿದ್ದಿದೆ.
ಈ ಮೂಲಕ ಕಾರ್ಯಾಚರಣೆ ಯಶಸ್ಸು ಕಂಡಿದೆ. ಇದು ನಾಲ್ಕು ವರ್ಷ ಪ್ರಾಯದ ಗಂಡು ಚಿರತೆ ಎನ್ನಲಾಗಿದೆ.