ಉಡುಪಿ : ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಸರ್ಕಾರದ ಅಭ್ಯರ್ಥಿಯಾದ ಮಾಜಿ ಸಚಿವ ಪ್ರಮೋದ್ ಮದ್ವಾರಾಜ್ ಅವರು ಚಿಕ್ಕಮಗಳೂರಿಗೆ ಬೇಟಿ ನೀಡಿದರು.
ಉಡುಪಿಯಿಂದ ನೇರವಾಗಿ ಶೃಂಗೇರಿಗೆ ಆಗಮಿಸಿದ ಪ್ರಮೋದ್ ಮದ್ವರಾಜ್ ಶೃಂಗೇರಿ ಶಾರದಾ ಪೀಠಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ನಂತರ ನರಸಿಂಹ ವನದಲ್ಲಿರುವ ಗುರು ನಿವಾಸಕ್ಕೆ ತೆರಳಿ ಶ್ರೀ ಜಗದ್ಗುರುಗಳ ಆಶೀರ್ವಾದ ಪಡೆದರು.
ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಭೇಟಿ ನೀಡಿದ್ದು. ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ವೇಳೆ ಜಿಲ್ಲಾ ಕಾಂಗ್ರೆಸ್, ಜೆಡಿಎಸ್ ಮುಖಂಡರು ಅವರಿಗೆ ಸಾಥ್ ನೀಡಿದರು.
ಶೃಂಗೇರಿ ದೇವರ ದರ್ಶನದ ಬಳಿ ಮೂಡಿಗೆರೆ, ಕೊಪ್ಪ, ಎನ್ ಆರ್ ಪುರ, ಬಾಳೆಹೊನ್ನೂರು, ನಂತರ ಚಿಕ್ಕಮಗಳೂರುನಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರ ಜೊತೆ ಚುನಾವಣೆಯ ಕುರಿತು ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಬೋಜೇಗೌಡ ಸೇರಿದಂತೆ ಹಲವರು ಮುಖಂಡರು ಪ್ರಮೋದ್ ಮದ್ವರಾಜ್ ಅವರಿಗೆ ಸಾಥ್ ನೀಡಲಿದ್ದಾರೆ.