ETV Bharat / state

ಉಡುಪಿಯಲ್ಲಿ ಬಾಲಕಿ ಅಪಹರಣ ಪ್ರಕರಣ: ಆರೋಪಿಗಳ ಬಂಧಿಸುವಂತೆ ಠಾಣೆ ಮುಂದೆ ಪ್ರತಿಭಟನೆ - udupi girl escape

ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಯವರು ಹಿರಿಯಡ್ಕದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಪಹರಣದ ಘಟನೆ ನಡೆದು ಮೂರು ದಿನ ಕಳೆದರೂ ಪತ್ತೆಯಾಗದೇ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

Child abduction case in Udupi
ಉಡುಪಿಯಲ್ಲಿ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳ ಬಂಧಿಸುವಂತೆ ಠಾಣೆ ಮುಂದೆ ಪ್ರತಿಭಟನೆ
author img

By

Published : Oct 31, 2020, 7:00 PM IST

ಉಡುಪಿ: ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಯವರು ಹಿರಿಯಡ್ಕದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಪಹರಣದ ಘಟನೆ ನಡೆದು ಮೂರು ದಿನ ಕಳೆದರೂ ಪತ್ತೆಯಾಗದೇ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸ್​​ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಜಮಾಯಿಸಿದ್ದರು. ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಣ ಮಾಡಿದ್ದಾನೆ. ಇದೊಂದು ಲವ್ ಜಿಹಾದ್ ಎಂದು ಸಂಘಟನೆಯ ಪ್ರಮುಖರು ಆಪಾದಿಸಿದ್ದಾರೆ. ಈ ಘಟನೆಗೆ ಯಾರೆಲ್ಲ ಕುಮ್ಮಕ್ಕು ನೀಡಿದ್ದಾರೆ ಎಲ್ಲರನ್ನೂ ತಕ್ಷಣಕ್ಕೆ ಬಂಧಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಉಪ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯ್ತು.

ಉಡುಪಿಯಲ್ಲಿ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳ ಬಂಧಿಸುವಂತೆ ಠಾಣೆ ಮುಂದೆ ಪ್ರತಿಭಟನೆ

ಮನವಿ ಸ್ವೀಕರಿಸಿ ಮಾತನಾಡಿದ ಉಪ ಪೊಲೀಸ್ ಅಧೀಕ್ಷಕ ಜೈಶಂಕರ್, ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಲ್ಲದೇ ಸಿಸಿಟಿವಿ ಫುಟೇಜ್ ಈಗಾಗಲೇ ಲಭ್ಯವಾಗಿದ್ದು, ಆರೋಪಿ ಚಲನವಲನಗಳ ಬಗ್ಗೆ ನಿಗಾ ಇರಿಸಲಾಗಿದೆ. ಶೀಘ್ರ ಆರೋಪಿ ಬಂಧಿಸಲಾಗುವುದು. ತನಿಖೆಯ ಬಗ್ಗೆ ಈಗಾಗಲೇ ಏನೂ ಹೇಳಲಿಕ್ಕೆ ಆಗುವುದಿಲ್ಲ ಇದರಿಂದ ಆರೋಪಗಳಿಗೆ ಅನುಕೂಲವಾಗಬಹುದು. ಆರೋಪಿಯನ್ನು ತಕ್ಷಣ ಬಂಧಿಸುವ ವಿಶ್ವಾಸ ನಮಗಿದೆ ಎಂದರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.