ಉಡುಪಿ: ಸಿಟಿ ಬಸ್ ನಿಲ್ದಾಣದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದಿದೆ. ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಗಳ ಕಂಡಕ್ಟರ್ಗಳು ಟೈಮಿಂಗ್ಸ್ ವಿಚಾರದಲ್ಲಿ ಜಗಳ ಶುರು ಮಾಡಿದ್ದು, ಬಳಿಕ ಪ್ರಯಾಣಿಕರ ಎದುರೇ ಬೀದಿ ಜಗಳ ಮಾಡಿದ್ದು, ಸಾರ್ವಜನಿಕರ ಅಶಾಂತಿಗೆ ಕಾರಣವಾಗಿದೆ. ಪ್ರಯಾಣಿಕರೊಬ್ಬರು ತೆಗೆದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಸಾರ್ವಜನಿಕ ಶಾಂತಿ ಭಂಗ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ.
ಇದನ್ನೂ ಓದಿ: ಉಡುಪಿಯ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ: ಮೂವರು ದುರ್ಮರಣ