ETV Bharat / state

CM ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸ: ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ - ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ ಜಿಲ್ಲೆಯ ಕುಂತಲ ನಗರದಲ್ಲಿ ಮಾಧವ ನಗರದಿಂದ ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಸಿಎಂ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು.

udupi
ಸಿಎಂ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸ
author img

By

Published : Oct 13, 2021, 8:01 PM IST

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದಿನವಿಡೀ ಉಡುಪಿ ಜಿಲ್ಲಾ ಪ್ರವಾಸ ಮಾಡಿದರು. ಜತೆಗೆ ಜಿಲ್ಲೆಯ ಕುಂತಲ ನಗರದಲ್ಲಿ ಮಾಧವ ನಗರದಿಂದ ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಒಟ್ಟು 6.36 ಕಿ.‌ಮೀ ಉದ್ದದ ರಸ್ತೆಯನ್ನು 4.6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುವ ಯೋಜನೆ ಇದಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ನಂತರ ಮಾತನಾಡಿದ ಸಿಎಂ, ಕೇಂದ್ರದ ಪ್ರಮಾಣೀಕರಣದ ನಂತರ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗುವುದು. ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ‌. ಮಕ್ಕಳು‌ ಮತ್ತು ಹದಿ ಹರೆಯದವರಿಗೆ ಕೋವಿಡ್ ಲಸಿಕೆ ಪರೀಕ್ಷೆ ಕೊನೆಯ ಹಂತ ತಲುಪಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಲಸಿಕೆ ಹಾಕಲಾಗುವುದು ಎಂದರು.

ಈಗಾಗಲೇ ಲಸಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಮುಂದಿದ್ದು, ಶೇ. 82 ರಷ್ಟು ಮೊದಲ ಡೋಸ್ ಹಾಗೂ ಶೇ.37 ರಷ್ಟು 2ನೇ ಡೋಸ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಶೇ. 90 ರಷ್ಟು ಮೊದಲನೇ ಹಾಗೂ ಶೇ. 75 ರಷ್ಟು 2ನೇ ಡೋಸ್ ಲಸಿಕೆಯನ್ನು ಹಾಕುವ ಗುರಿಯನ್ನು ಹೊಂದಲಾಗಿದೆ ಎಂದರು.

ಶೀಘ್ರವೇ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ

ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಚಿಂತನೆ ಮಾಡಿದ್ದು, ಇತರ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಕಾಯ್ದೆಯ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಆದಷ್ಟು ಬೇಗ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ವಿ.ಸುನೀಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್ ಸಿಎಂಗೆ ಸಾಥ್ ನೀಡಿದ್ರು.

ಇದನ್ನೂ ಓದಿ: ಕಲಬುರಗಿ ಭೂಕಂಪನದ ಬಗ್ಗೆ ವರದಿ ನೀಡಲು ಸಿಎಂ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.