ETV Bharat / state

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಶಾಲಾ ಮುಖ್ಯೋಪಾಧ್ಯಾಯ ಅಮಾನತು

ಸರ್ಕಾರಿ ಆದೇಶ ಪಾಲಿಸದ ಶಾಲಾ ಮುಖ್ಯೋಪಾಧ್ಯಾಯನೋರ್ವನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಮಾನತುಗೊಂಡ ಶಾಲಾ ಮುಖ್ಯೋಪಾಧ್ಯಾಯ ಸುಂದರ್ ಮಾಸ್ತರ್
author img

By

Published : Apr 12, 2019, 6:11 PM IST

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯನೋರ್ವನನ್ನು ಅಮಾನತುಗೊಳಿಸಲಾಗಿದೆ. ಕೊಡವೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಂದರ್ ಮಾಸ್ತರ್ ಅಮಾನತುಗೊಂಡ ಶಿಕ್ಷಕ ಎಂದು ತಿಳಿದು ಬಂದಿದೆ.

ಏ. 7ರಂದು ಕಾರ್ಕಳದಲ್ಲಿ ನಡೆದ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಸುಂದರ್​ ಭಾಗಿಯಾಗಿದ್ದರು ಎನ್ನಲಾಗಿದೆ. ಸರ್ಕಾರಿ ನೌಕರರು ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುವಂತಿಲ್ಲ ಎಂಬ ಆದೇಶವನ್ನು ಉಲ್ಲಂಘನೆ ಮಾಡಿದ ಆರೋಪ ಇವರು ಹೊಂದಿದ್ದಾರೆ. ದಲಿತರ ವಿವಿಧ ಬೇಡಿಕೆಯನ್ನು ಮುಖ್ಯಮಂತ್ರಿಗೆ ಸಲ್ಲಿಸಲು ತೆರಳಿದ್ದ ಸುಂದರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.