ಉಡುಪಿ: ನಗರದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದವರ ವಿರುದ್ಧ ನಗರಸಭೆ ಆಯುಕ್ತ ಆನಂದ್ ಕಲ್ಲೋಲಿಕರ್ ಕೆಂಡಾಮಂಡಲರಾಗಿದ್ದರು.
ಸ್ಥಳಕ್ಕೆ ಪೌರಾಯುಕ್ತರು ಆಗಮಿಸುತ್ತಿದ್ದಂತೆ ವ್ಯಾಪಾರಿಗಳು ದಡಬಡನೆ ಅಂಗಡಿ ಬಾಗಿಲುಗಳನ್ನು ಮುಚ್ಚಿದ್ದಾರೆ. ಮಾತಿಗೆ ಬಗ್ಗದ ಕೆಲ ವ್ಯಾಪಾರಿಗಳ ಮೇಲೆ ಲೈಸನ್ಸ್ ರದ್ದು ಮಾಡುವುದಾಗಿ ಎಚ್ಚರಿಸಿದರು. ಅಲ್ಲದೇ ನಿತ್ಯದ ಅಗತ್ಯವಸ್ತುಗಳನ್ನು ಹೊರತುಪಡಿಸಿ ಬೇರೆಲ್ಲ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲು ಆದೇಶ ನೀಡಿದರು.