ಉಡುಪಿ: ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು, ಹುತಾತ್ಮ ಯೋಧರ ಸ್ಮಾರಕದೆದುರು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿ, ನಿರುದ್ಯೋಗ ಸಮಸ್ಯೆ, ಕೃಷಿ ಬಿಕ್ಕಟ್ಟು, ಬ್ಯಾಂಕ್ ವಂಚನೆ, ಕಪ್ಪುಹಣ ತರುವಲ್ಲಿನ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.