ಉಡುಪಿ: ಜನರನ್ನು ಮತಾಂತರಕ್ಕೆ ಪ್ರಚೋದಿಸುತ್ತಿದ್ದರು ಎಂಬ ಆರೋಪದ ಮೇಲೆ ಇಬ್ಬರು ಯುವತಿಯರನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಪ್ರಕರಣ ಕಾರ್ಕಳ ತಾಲೂಕಿನ ಮಾವಿನಕಟ್ಟೆಯಲ್ಲಿ ನಡೆದಿದೆ.
ಆರ್ಥಿಕವಾಗಿ ಹಿಂದುಳಿದ ಬಡವರ್ಗಗಳನ್ನು ಗುರಿಯಾಗಿಸಿಕೊಂಡು, ಆಮಿಷಗಳನ್ನು ಒಡ್ಡಿ ತಮ್ಮ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದಿಸುತ್ತಿದ್ದರು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಅಲ್ಲದೆ, ಇಬ್ಬರು ಯುವತಿಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮತಾಂತರಕ್ಕೆ ಬಳಸುವ ಪ್ರಚೋದನಕಾರಿ ಕರಪತ್ರಗಳು ಪತ್ತೆಯಾಗಿವೆ ಎಂದು ಹೇಳಲಾಗ್ತಿದೆ.
ಸದ್ಯ ಈ ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.