ಉಡುಪಿ: ಕೊರೊನಾಗೆ ಜಿಲ್ಲೆಯಲ್ಲಿ ಮತ್ತಿಬ್ಬರು ಬಲಿಯಾಗಿದ್ದು, ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಸತ್ತವರೆಲ್ಲರೂ ಹಿರಿಯ ನಾಗರಿಕರಾಗಿದ್ದು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದವರಾಗಿದ್ದಾರೆ.
ಜಿಲ್ಲೆಯಲ್ಲಿ ನಿನ್ನೆ 217 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,353ಕ್ಕೆ ಏರಿಕೆಯಾಗಿದೆ. ಈವರೆಗೆ 3157 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸದ್ಯ 2,153 ಸಕ್ರಿಯ ಪ್ರಕರಣಗಳಿವೆ. ಜಿಲ್ಲಾ ಹಿರಿಯ ಆರೋಗ್ಯಾಧಿಕಾರಿಯೊಬ್ಬರಿಗೆ ಕೊರೊನಾ ತಗುಲಿದೆ. ಈ ಹಿನ್ನೆಲೆ ಕಚೇರಿಗೆ ಸ್ಯಾನಿಟೈಸ್ ಮಾಡಲು ನಿರ್ಧರಿಸಲಾಗಿದೆ.