ಉಡುಪಿ: ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
ಇದೀಗ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ನಲ್ಲಿದ್ದವರ ಮೂವರ ವರದಿ ಪಾಸಿಟಿವ್ ಬಂದಿದೆ. ಒಬ್ಬ ಪುರುಷ, ಮಹಿಳೆ ಮತ್ತು 9 ವರ್ಷದ ಹೆಣ್ಣು ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ. P-2231, P-2233, P-2256 ರೋಗಿಗಳನ್ನು ಕೋವಿಡ್ ಆಸ್ಪತ್ರೆಗೆ ಜಿಲ್ಲಾಡಳಿತ ಶಿಫ್ಟ್ ಮಾಡಿದೆ.