ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಮತ್ತೆ ನಾಲ್ವರನ್ನು ಬಲಿ ಪಡೆದಿದೆ. ಸೋಮವಾರದಂದು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಇನ್ನು ಭಾನುವಾರ ರಾತ್ರಿ ಕುಂದಾಪುರದ ಮಹಿಳೆಯೊಬ್ಬರು ಬ್ರಹ್ಮಾವರದ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು. ಅಷ್ಟೇ ಅಲ್ಲದೆ, ಶನಿವಾರದಂದು ಹೃದಯಾಘಾತ ಸಂಭವಿಸಿ ನೇಜಾರು ಎಂಬಲ್ಲಿನ ವ್ಯಕ್ತಿ ಮೃತಪಟ್ಟಿದ್ದರು. ಈ ಇಬ್ಬರ ಮರಣೋತ್ತರ ಪರೀಕ್ಷೆಯಲ್ಲಿ ನಡೆಸಿದ ಬಳಿಕ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಒಟ್ಟು ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.