ಉಡುಪಿ: ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 82 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಕೊರೊನಾ ಕಾರಣವಲ್ಲವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಮೃತರು ಮೂಲತಃ ಪಂಜಾಬ್ನವರಾಗಿದ್ದು, ನವೆಂಬರ್ನಿಂದ ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಸಾವಿಗೆ ಕೊರೊನಾ ಕಾರಣವಲ್ಲ. ಈ ಬಗ್ಗೆ ಅನಗತ್ಯವಾಗಿ ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಅನಗತ್ಯ ವದಂತಿಗಳಿಗೆ ಕಿವಿಗೊಡದಂತೆ ತಿಳಿಸಿದ್ದಾರೆ.