ಉಡುಪಿ: ಇಂದು ಜಿಲ್ಲೆಯಲ್ಲಿ ಮೂವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.
ಕಾರ್ಕಳ ಗ್ರಾಮಾಂತರ, ಅಜೆಕಾರು, ಬ್ರಹ್ಮಾವರ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂರು ಠಾಣೆಯ ಎಲ್ಲಾ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.
ಸಂಪೂರ್ಣ ಸ್ಯಾನಿಟೈಸ್ಗೆ ನಿರ್ಧಾರ:
ಪೊಲೀಸರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಮೂರು ಠಾಣೆಗಳನ್ನು ಸ್ಯಾನಿಟೈಸ್ ಮಾಡಲು ನಿರ್ಧರಿಸಲಾಗಿದ್ದು, ಸ್ಯಾನಿಟೈಸ್ ಮಾಡಿ ಎರಡು ದಿನಗಳ ಬಳಿಕ ಕಾರ್ಯಾರಂಭ ಮಾಡಲು ನಿರ್ಧರಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು, ಸೋಂಕು ತಗುಲಿರುವ ಈ ಮೂವರ ಪೊಲೀಸರ ಜೊತೆ ಸಂಪರ್ಕದಲ್ಲಿದ್ದವರ ಕುರಿತಂತೆ ಪಟ್ಟಿ ಮಾಡುತ್ತಿದ್ದೇವೆ. ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.